ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ತಡಬಡಾಯಿಸಿತ್ತು. ಅದರಲ್ಲೂ ಆರಂಭಿಕ ಪೃಥ್ವಿ ಶಾ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಗೆ ಬುಲಾವ್ ನೀಡುವ ಸಾಧ್ಯತೆಯಿದೆ.
ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ತಮ್ಮ ಕಳಪೆ ಫಾರ್ಮ್ ಮುಂದುವರಿಸಿ ಮೊದಲ ಇನಿಂಗ್ಸ್ ನಲ್ಲಿ ಶೂನ್ಯ, ದ್ವಿತೀಯ ಇನಿಂಗ್ಸ್ ನಲ್ಲಿ 4 ರನ್ ಗೆ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಅವರ ಬದಲು ಮಯಾಂಕ್ ಅಗರ್ವಾಲ್ ಜತೆಗೆ ಕೆಎಲ್ ರಾಹುಲ್ ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಶಬ್ನಂ ಗಿಲ್ ಕೂಡಾ ಸ್ಪರ್ಧೆಯಲ್ಲಿದ್ದರೂ ಅನುಭವದ ಆಧಾರದಲ್ಲಿ ರಾಹುಲ್ ಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.