ಜಿಂಬಾಬ್ವೆ ಸರಣಿಗೆ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕ
ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ನಾಯಕತ್ವ ಸಿಗಲಿದೆ. ಇತ್ತೀಚೆಗಿನ ದಿನಗಳಲ್ಲಿ ಸರಣಿಗೊಬ್ಬ ನಾಯಕನಾಗುವುದು ಟೀಂ ಇಂಡಿಯಾದಲ್ಲಿ ಸರ್ವೇ ಸಾಮಾನ್ಯವಾಗಿದೆ.
ಇತ್ತೀಚೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕೆಎಲ್ ರಾಹುಲ್ ಈಗ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶೇ.80 ರಷ್ಟು ಫಿಟ್ನೆಸ್ ಪಡೆದುಕೊಂಡಿದ್ದಾರೆ. ಸದ್ಯದಲ್ಲೇ ಅವರು ಶೇ.100 ರಷ್ಟು ಫಿಟ್ ಆಗಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿ ವೇಳೆಗೆ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ.