ಕೆಎಲ್ ರಾಹುಲ್ ಬದಲು ರೋಹಿತ್ ಶರ್ಮಾಗೆ ಸ್ಥಾನ: ಆಯ್ಕೆ ಸಮಿತಿ ಮುಖ್ಯಸ್ಥರಿಂದಲೇ ಬಂತು ಸೂಚನೆ
ಇದರಿಂದಾಗಿ ಮುಂಬರುವ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಆಯ್ಕೆಯಾದರೂ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈಗಾಗಲೇ ಮಾಜಿ ನಾಯಕ ಸೌರವ್ ಗಂಗೂಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡಾ ರಾಹುಲ್ ಬದಲಿಗೆ ರೋಹಿತ್ ರನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು ಎಂದಿದ್ದರು. ಹೀಗಾಗಿ ರಾಹುಲ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ.