ಮದುವೆ ಮರುದಿನವೇ ಕ್ರಿಕೆಟ್ ಗೆ ಮರಳಿದ ಕೆಎಲ್ ರಾಹುಲ್

ಶನಿವಾರ, 28 ಜನವರಿ 2023 (08:50 IST)
Photo Courtesy: Twitter
ಮುಂಬೈ: ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಜೊತೆ ಮದುವೆಯಾದ ಕ್ಷಣದಲ್ಲೇ ಕ್ರಿಕೆಟಿಗ ಕೆಎಲ್ ರಾಹುಲ್ ಅಭ್ಯಾಸಕ್ಕೆ ಮರಳಿದ್ದಾರೆ.

ಸದ್ಯಕ್ಕೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಮುಂಬರುವ ಆಸ್ಟ್ರೇಲಿಯಾ ಸರಣಿಗೆ ತಂಡಕ್ಕೆ ಲಭ್ಯರಾಗಲಿದ್ದಾರೆ.

ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಟೆಸ್ಟ್ ಸರಣಿ ಭಾರತಕ್ಕೆ ಮಹತ್ವದ್ದಾಗಿದೆ. ಈ ಹಿನ್ನಲೆಯಲ್ಲಿ ರಾಹುಲ್ ಕ್ರಿಕೆಟ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾಗಿರುವ ರಾಹುಲ್ ಸದ್ಯಕ್ಕೆ ಆರತಕ್ಷತೆ, ಹನಿಮೂನ್ ಪ್ಲ್ಯಾನ್ ಮುಂದೂಡಿ ಕ್ರಿಕೆಟ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ