ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ.
ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾಗ ರಾಹುಲ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಇದರಿಂದಾಗಿ ಅವರು ಐಸೋಲೇಷನ್ ಗೊಳಗಾಗಿದ್ದರು.
ಇದೀಗ ಅವರು ಚೇತರಿಸಿಕೊಂಡಿದ್ದರೂ ವೈದ್ಯರು ಇನ್ನೂ ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಅಧಿಕೃತವಾಗಿ ವಿಂಡೀಸ್ ಸರಣಿಯಿಂದ ಹೊರಬಿದ್ದಿದ್ದು, ಜಿಂಬಾಬ್ವೆ ಸರಣಿ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.