ಮುಂದಿನ ತಿಂಗಳು ಕೆಎಲ್ ರಾಹುಲ್ ಮದುವೆ! ಲಂಕಾ ಸರಣಿಗೆ ಗೈರು?

ಗುರುವಾರ, 1 ಡಿಸೆಂಬರ್ 2022 (09:11 IST)
Photo Courtesy: Twitter
ಮುಂಬೈ: ಮುಂದಿನ ತಿಂಗಳು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದಕ್ಕಾಗಿ ರಾಹುಲ್ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ ಮೊದಲ  ವಾರದಲ್ಲಿ ರಾಹುಲ್-ಅಥಿಯಾ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

ಇದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳೂ ನಡೆದಿವೆ. ಅಥಿಯಾ ತಂದೆ, ಬಾಲಿವುಡ್ ನಟ ಸುನಿಲ್ ಶೆಟ್ಟಿಯವರ ಮುಂಬೈನ ಬಂಗಲೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಇತ್ತೀಚೆಗಷ್ಟೇ ಸುನಿಲ್ ಶೆಟ್ಟಿ ಸದ್ಯದಲ್ಲೇ ಇಬ್ಬರೂ ಮದುವೆಯಾಗಲಿದ್ದಾರೆ ಎಂದಿದ್ದರು. ರಾಹುಲ್ ಕ್ರಿಕೆಟ್ ನಲ್ಲಿ ಬ್ಯುಸಿಯಾಗಿದ್ದರಿಂದ ವಿವಾಹ ಮುಂದೂಡಿಕೆಯಾಗುತ್ತಲೇ ಇತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ