ಏಷ್ಯಾ ಕಪ್ ಗೆ ಮುನ್ನ ಮತ್ತೆ ಫಿಟ್ನೆಸ್ ಪರೀಕ್ಷೆಗೊಳಗಾಗಲಿರುವ ಕೆಎಲ್ ರಾಹುಲ್

ಗುರುವಾರ, 11 ಆಗಸ್ಟ್ 2022 (07:52 IST)
ಬೆಂಗಳೂರು: ಗಾಯದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕೆಎಲ್ ರಾಹುಲ್ ಈಗ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡದ ಉಪ ನಾಯಕರಾಗಿ ಕಮ್ ಬ್ಯಾಕ್ ಮಾಡಿರುವ ರಾಹುಲ್ ಯುಎಇನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಗೆ ತಂಡದ ಜೊತೆ ತೆರಳುವ ಮುನ್ನ ಫಿಟ್ನೆಸ್ ಸಾಬೀತುಪಡಿಸಬೇಕಿದೆ.

ರಾಹುಲ್ ಇದೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಫಿಟ್ ಆಗಿದ್ದಾರೆ. ಹಾಗಿದ್ದರ ದುಬೈ ವಿಮಾನವೇರುವ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ