ಇಂದು ಕೊಹ್ಲಿ, ದ್ರಾವಿಡ್ ಇಂಗ್ಲೆಂಡ್ ಗೆ ಪ್ರಯಾಣ

ಮಂಗಳವಾರ, 23 ಮೇ 2023 (08:20 IST)
Photo Courtesy: Twitter
ಮುಂಬೈ: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಇಂಗ್ಲೆಂಡ್ ಪ್ರಯಾಣ ಬೆಳೆಸಲಿದೆ.

ವಿರಾಟ್‍ ಕೊಹ್ಲಿ, ಕೋಚ್ ರಾಹುಲ್ ದ್ರಾವಿಡ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಸೇರಿದಂತೆ ಐಪಿಎಲ್ ಆಡದ ಆಟಗಾರರ ಮೊದಲ ಬ್ಯಾಚ್ ಇಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ. ಇದೀಗ ಒಟ್ಟು ಏಳು ಆಟಗಾರರು ಇಂಗ್ಲೆಂಡ್ ಗೆ ತೆರಳಲಿದ್ದಾರೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನುಳಿದ ಆಟಗಾರರು ಐಪಿಎಲ್ ಆಡುತ್ತಿರುವುದರಿಂದ ಅದಾದ ಬಳಿಕ ಇಂಗ್ಲೆಂಡ್ ಗೆ ತೆರಳಲಿದ್ದಾರೆ.

ಜೂನ್ 7 ರಿಂದ ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕಿರೀಟಕ್ಕಾಗಿ ಹೋರಾಡಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ