ಭಾರತ-ದ.ಆಫ್ರಿಕಾ ಟೆಸ್ಟ್: ಶತಕ ಸಿಡಿಸಿದ ಮಯಾಂಕ್ ಅಗರ್ವಾಲ್

ಗುರುವಾರ, 3 ಅಕ್ಟೋಬರ್ 2019 (10:20 IST)
ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ನ ದ್ವಿತೀಯ ದಿನ ಕನ್ನಡಿಗ ಮಯಾಂಕ್ ಅಗರ್ವಾಲ್ ಶತಕ ಭಾರಿಸಿ ಕನಸು ನನಸು ಮಾಡಿಕೊಂಡಿದ್ದಾರೆ.


ಟೆಸ್ಟ್ ಕ್ರಿಕೆಟ್ ನಲ್ಲಿ ಮಯಾಂಕ್ ಗೆ ಇದು ಚೊಚ್ಚಲ ಶತಕವಾಗಿದೆ. ನಿನ್ನೆಯ ದಿನದಂತ್ಯಕ್ಕೆ ಮಯಾಂಕ್ 84 ರನ್ ಗಳಿಸಿ ಅಜೇಯರಾಗುಳಿದಿದ್ದರು. ಇಂದು ಶತಕ ಗಳಿಸಿ ಸಂಭ್ರಮಸಿದ್ದಾರೆ.

ಮಯಾಂಕ್ ಜತೆಗೆ ಬ್ಯಾಟಿಂಗ್ ಮಾಡುತ್ತಿರುವ ರೋಹಿತ್ ಕೂಡಾ ನಿನ್ನೆಯ ಶತಕದ ಸ್ಕೋರ್ ವಿಸ್ತರಿಸಿದ್ದು ಇಂದು ಇತ್ತೀಚೆಗಿನ ವರದಿ ಬಂದಾಗ 140 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಇಬ್ಬರೂ ಆರಂಭಿಕರು ಶತಕ ಗಳಿಸಿರುವುದು ಇದು 10 ನೇ ಬಾರಿ ಎನ್ನುವುದು ವಿಶೇಷವಾಗಿದೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 248 ರನ್ ಗಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ