ಮೊದಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದರೂ ಮಯಾಂಕ್ ಅಗರ್ವಾಲ್ ಗೆ ನಿರಾಶೆ ತಪ್ಪಲಿಲ್ಲ!

ಬುಧವಾರ, 26 ಡಿಸೆಂಬರ್ 2018 (12:39 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದ ಕನ್ನಡಿಗ ಮಯಾಂಕ್ ಅಗರ್ವಾಲ್ ಇತಿಹಾಸ ನಿರ್ಮಿಸಿದ್ದಾರೆ.


ಮೊದಲ ಪಂದ್ಯದಲ್ಲಿ 76 ರನ್ ಗಳಿಸಿದ ಮಯಾಂಕ್ ಈ ಮೂಲಕ ಭಾರತದ ಪರ ಆರಂಭಿಕರಾಗಿ ವಿದೇಶದಲ್ಲಿ ಮೊದಲ ಪಂದ್ಯದಲ್ಲೇ ಅಧಿಕ ರನ್ ಗಳಿಸಿದ ಸುನಿಲ್ ಗವಾಸ್ಕರ್ ದಾಖಲೆ (65) ಮುರಿದರು.

ಆದರೆ ಉತ್ತಮವಾಗಿ ಆಡುತ್ತಿದ್ದ ಮಯಾಂಕ್ ಚೊಚ್ಚಲ ಪಂದ್ಯದಲ್ಲಿ ಚೊಚ್ಚಲ ಶತಕ ಗಳಿಸುವ ಅವಕಾಶದಿಂದ ವಂಚಿತರಾಗಿ ನಿರಾಸೆ ಅನುಭವಿಸಿದರು. ಮೊದಲ ದಿನದಂತ್ಯಕ್ಕೆ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದೆ.  ನಿಧಾನಗತಿಯ ರನ್ ಗಳಿಸಿದ ಭಾರತೀಯ ಬ್ಯಾಟ್ಸ್ ಮನ್ ಗಳು ಇಂದು ವಿಕೆಟ್ ಕಾಯ್ದುಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ ವಹಿಸಿದ್ದರು.

ಇದೀಗ ಉತ್ತಮ ಜತೆಯಾಟವಾಡುತ್ತಿರುವ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಭಾರತಕ್ಕೆ ದೊಡ್ಡ ಮೊತ್ತ ಗಳಿಸುವ ಅಡಿಪಾಯ ಹಾಕಿದ್ದಾರೆ. ಪೂಜಾರ 68 ರನ್ ಗಳಿಸಿದರೆ ಕೊಹ್ಲಿ 47 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ