ಪತ್ನಿಗೆ ಕಿರುಕುಳ ಕೊಟ್ಟ ಆರೋಪವಿದ್ದರೂ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದ ಬಿಸಿಸಿಐ
ಈ ಆರೋಪಗಳಿಂದಾಗಿ ಶಮಿಗೆ ಮೊದಲು ಪ್ರಕಟಿಸಲಾಗಿದ್ದ ವಾರ್ಷಿಕ ಗುತ್ತಿಗೆಯಲ್ಲಿ ಸ್ಥಾನ ನೀಡಲಾಗಿರಲಿಲ್ಲ. ಇದೀಗ 3 ಕೋಟಿ ರೂ. ಗಳ ಒಪ್ಪಂದ ನೀಡಿದೆ.
ಆಂತರಿಕ ಸಮಿತಿ ರಚಿಸಿ ತನಿಖೆ ನಡೆಸಿದ ಬಿಸಿಸಿಐ ಮೊದಲೇ ಹೇಳಿದಂತೆ ಕ್ಲೀನ್ ಚಿಟ್ ಸಿಕ್ಕಿದ ಹಿನ್ನಲೆಯಲ್ಲಿ ವಾರ್ಷಿಕ ಗುತ್ತಿಗೆ ನೀಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಶಮಿ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳಿಂದಲೂ ಮುಕ್ತನಾಗುವ ವಿಶ್ವಾಸವಿದೆ ಎಂದಿದ್ದಾರೆ. ಪತ್ನಿ ಹಸೀನ್ ಜಹಾನ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದರು.