ಟಿ20 ವಿಶ್ವಕಪ್: ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಶಮಿ
ಶುಕ್ರವಾರ, 14 ಅಕ್ಟೋಬರ್ 2022 (19:02 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಆಡಲಿರುವ ಟೀಂ ಇಂಡಿಯಾಗೆ ಮೊಹಮ್ಮದ್ ಶಮಿ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಶಮಿ ಈಗಾಗಲೇ ಮೀಸಲು ಆಟಗಾರನಾಗಿ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಇದೀಗ ಜಸ್ಪ್ರೀತ್ ಬುಮ್ರಾ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈಗಾಗಲೇ ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ಪ್ರವಾಸ ಬೆಳೆಸಿದ್ದಾರೆ. ಆ ಮೂಲಕ ಕಳೆದ ಟಿ20 ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಸೀಮಿತ ಓವರ್ ಗಳ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಲಿದ್ದಾರೆ.