ಶಾರ್ದೂಲ್ ಠಾಕೂರ್ ಗೆ ಕಿಕ್ ಔಟ್ ಕೊಟ್ಟ ಮೊಹಮ್ಮದ್ ಶಮಿ ಫೈಫರ್!
ಶಮಿ ಬದಲಿಗೆ ಮೊದಲ ನಾಲ್ಕು ಪಂದ್ಯಗಳಲ್ಲಿ ಶಾರ್ದೂಲ್ ಮತ್ತು ರವಿಚಂದ್ರನ್ ಅಶ್ವಿನ್ ರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಧರ್ಮಶಾಲಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶಮಿ ಕಣಕ್ಕಿಳಿದಿದ್ದಲ್ಲದೆ ಐದು ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ತಾವೇಕೆ ಅಗತ್ಯ ಎಂಬುದನ್ನು ತೋರಿಸಿಕೊಟ್ಟರು.
ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಶಾರ್ದೂಲ್ ಗಿಂತ ಮೊಹಮ್ಮದ್ ಶಮಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುವುದು ಖಚಿತ. ಇದರೊಂದಿಗೆ ಟೀಂ ಇಂಡಿಯಾ ವೇಗದ ಬೌಲಿಂಗ್ ವಿಭಾಗ ಮತ್ತಷ್ಟು ಬಲವಾಗಲಿದೆ.