ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ: ಚೋಕರ್‌ ಹಣೆಪಟ್ಟಿಯಿಂದ ಹೊರಬರುತ್ತಾ ದಕ್ಷಿಣ ಆಫ್ರಿಕಾ

Sampriya

ಬುಧವಾರ, 5 ಮಾರ್ಚ್ 2025 (14:09 IST)
Photo Courtesy X
ಲಾಹೋರ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿವೆ.

ಟಾಸ್‌ ಗೆದ್ದ ನ್ಯೂಜಿಲೆಂಡ್‌ ನಾಯಕ ಮಿಚೆಲ್‌ ಸ್ಯಾಂಟನರ್‌ ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್‌ಗೆ ಇಳಿಯಲಿದೆ. ಈ ಬಾರಿಯಾದರೂ ದಕ್ಷಿಣ ಆಫ್ರಿಕಾ ತಂಡವು ಚೋಕರ್‌ ಪಟ್ಟವನ್ನು ಕಳೆದುಕೊಳ್ಳುತ್ತಾ ಎಂಬ ಪ್ರಶ್ನೆ ಮತ್ತೆ ಮೂಡಿದೆ.

ಈ ಪಂದ್ಯವನ್ನು ಗೆಲ್ಲುವ ತಂಡವು ಭಾನುವಾರ ದುಬೈನಲ್ಲಿ ನಡೆಯುವ ಫೈನಲ್‌ನಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಮಂಗಳವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಭಾರತ ತಂಡವು 4 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಫೈನಲ್‌ ಪ್ರವೇಶಿಸಿದೆ.

ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡವು ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ. ಭಾರತ ಕಳೆದ ವರ್ಷ ಟಿ20 ವಿಶ್ವಕಪ್‌ ಕಿರೀಟ ಗೆದ್ದಿದ್ದು, ಮತ್ತೊಂದು ಐಸಿಸಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ