ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ತೃತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಕಳೆದ ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಅತಿಥೇಯರು ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದ್ದರು. ಹೀಗಾಗಿ ಈ ಪಂದ್ಯ ನ್ಯೂಜಿಲೆಂಡ್ ಗೆ ಮಾಡು ಇಲ್ಲವೇ ಮಡಿ ಎನ್ನುವ ಪರಿಸ್ಥಿತಿಯಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಭಾರತ ತಂಡ ನಿರೀಕ್ಷೆಯಂತೇ ಯಾವುದೇ ಬದಲಾವಣೆಯಿಲ್ಲದೇ ಈ ಪಂದ್ಯದಲ್ಲೂ ಕಣಕ್ಕಿಳಿಯುತ್ತಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಟೀಂ ಇಂಡಿಯಾಗೆ ಇಂದಿನ ಪಂದ್ಯ ಗೆದ್ದರೆ ಸರಣಿ ಗೆದ್ದಂತೆ.