ಐಪಿಎಲ್ ನ ವರ್ಣರಂಜಿತ ಕಾರ್ಯಕ್ರಮ ರದ್ದು

ಶನಿವಾರ, 23 ಫೆಬ್ರವರಿ 2019 (09:08 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಾವಳಿಗೆ ವರ್ಣರಂಜಿತ ಚಾಲನೆ ಸಿಗಲ್ಲ. ನಿನ್ನೆ ನಡೆದ ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.


ವಿನೋದ್ ರೈ ನೇತೃತ್ವದ ಬಿಸಿಸಿಐ ಆಡಳಿತ ಮಂಡಳಿ ಮಾರ್ಚ್ 23 ರಂದು ಚೆನ್ನೈನಲ್ಲಿ ಆಯೋಜಿಸಬೇಕಿದ್ದ ವರ್ಣರಂಜಿತ ಆರಂಭಿಕ ಮಹೋತ್ಸವವನ್ನು ರದ್ದುಗೊಳಿಸಲು ತೀರ್ಮಾನಿಸಿದೆ.

ಆ ಕಾರ್ಯಕ್ರಮಕ್ಕೆ ನಿಗದಿಯಾಗಿದ್ದ ಹಣವನ್ನು ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ನೀಡಲು ಬಿಸಿಸಿಐ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಐಪಿಎಲ್ ಗೆ ವರ್ಣರಂಜಿತ ಆಹ್ವಾನವಿರಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ