ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲು ಬಯಸಿದ ಗಂಗೂಲಿಗೆ ಶಾಕ್ ಕೊಟ್ಟ ಜಾರ್ಖಂಡ್ ಸಂಸ್ಥೆ

ಶುಕ್ರವಾರ, 7 ಆಗಸ್ಟ್ 2020 (12:40 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಇನ್ನೊಂದು ಅವಧಿಗೆ ಮುಂದುವರಿಯಲು ಕಾನೂನಿನಲ್ಲಿ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಸೌರವ್ ಗಂಗೂಲಿಗೆ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯಿಂದ ವಿರೋಧ ವ್ಯಕ್ತವಾಗಿದೆ.


2025 ರವರೆಗೂ ಅಧಿಕಾರಾವಧಿ ವಿಸ್ತರಣೆ ಮಾಡಲು ಅವಕಾಶ ನೀಡಬೇಕೆಂದು ಕೋರಿ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿ ಸದ್ಯದಲ್ಲೇ ಕೋರ್ಟ್ ತೀರ್ಪು ನೀಡಲಿದೆ.

ಆದರೆ ಈ ನಡುವೆ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ನರೇಶ್ ಮಲ್ಕಾನಿ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ರೀತಿ ಕಾನೂನಿಗೆ ತಿದ್ದುಪಡಿ ಮಾಡುವುದು ಲೋಧಾ ಸಮಿತಿಯ ಶಿಫಾರಸ್ಸನ್ನು ಸಡಿಲ ಮಾಡುವ ದುರುದ್ದೇಶದಿಂದ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ