ಐಪಿಎಲ್: ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಪಾಕಿಸ್ತಾನ
ಭಾರತದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನೇರಪ್ರಸಾರವನ್ನು ಪಾಕಿಸ್ತಾನದಲ್ಲಿ ಪ್ರಸಾರ ಮಾಡದೇ ಇರಲು ಪಾಕ್ ಸರ್ಕಾರ ತೀರ್ಮಾನಿಸಿದೆ. ‘ಪುಲ್ವಾಮಾ ದಾಳಿಯ ಬಳಿಕ ಪಾಕ್ ಕ್ರಿಕೆಟ್ ಲೀಗ್ ಪಂದ್ಯಾವಳಿಗಳನ್ನು ಪ್ರಸಾರ ಮಾಡುವ ವಿಚಾರದಲ್ಲಿ ಭಾರತೀಯ ಕಂಪನಿಗಳು ಮತ್ತು ಸರ್ಕಾರ ನಡೆದುಕೊಂಡ ರೀತಿ ಇನ್ನೂ ಹಸಿಯಾಗಿದೆ. ಹೀಗಾಗಿ ನಾವೂ ಕೂಡಾ ನಮ್ಮ ದೇಶದಲ್ಲಿ ಐಪಿಎಲ್ ಪ್ರಸಾರ ಮಾಡುತ್ತಿಲ್ಲ’ ಎಂದು ಪಾಕ್ ಮಾಹಿತಿ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.