ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 20214 ರಿಂದಲೂ ಟೀಂ ಇಂಡಿಯಾ ಗೆಲ್ಲುತ್ತಲೇ ಬಂದಿದೆ. ಟೀಂ ಇಂಡಿಯಾ ಈ ಟೆಸ್ಟ್ ಸರಣಿಯಲ್ಲಿ ತವರಿನಲ್ಲಿರಲಿ, ಆಸ್ಟ್ರೇಲಿಯಾದಲ್ಲಿರಲಿ ತನ್ನ ಪ್ರಾಬಲ್ಯ ಸಾಧಿಸುತ್ತಲೇ ಬಂದಿದೆ. ಆದರೆ ಇದೀಗ ಕಳಪೆ ಫಾರ್ಮ್ ನಲ್ಲಿರುವ ಟೀಂ ಇಂಡಿಯಾಗೆ ಗೆಲುವು ಕಷ್ಟವೆಂದೇ ಹೇಳಲಾಗುತ್ತಿದೆ.
ಜೊತೆಗೆ ಮೊದಲ ಪಂದ್ಯದಕ್ಕೆ ನಾಯಕ ರೋಹಿತ್ ಶರ್ಮಾ ಗೈರಾಗಲಿದ್ದಾರೆ. ಜೊತೆಗೆ ಟೀಂ ಇಂಡಿಯಾ ಟಾಪ್ ಬ್ಯಾಟಿಗ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಫಾರ್ಮ್ ನಲ್ಲಿಲ್ಲ. ಶುಬ್ಮನ್ ಗಿಲ್ ಆಡುವುದು ಇನ್ನೂ ಖಚಿತವಾಗಿಲ್ಲ. ಹೀಗಾಗಿ ಟೀಂ ಇಂಡಿಯಾ ಒತ್ತಡದಲ್ಲಿದೆ.