ಕಾಮನ್ ವೆಲ್ತ್ ಗೇಮ್ಸ್ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ ವಾಡ್ ಗೆ 15 ಲಕ್ಷ ಬಹುಮಾನ
ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೇವಲ 9 ರನ್ ಗಳಿಂದ ಸೋತಿತ್ತು. ಈ ತಂಡದ ಭಾಗವಾಗಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ ವಾಡ್ ಗೆ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರೂ. ಬಹುಮಾನ ನೀಡುವುದಾಗಿ ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಹೇಳಿದ್ದಾರೆ.