ರಣಜಿ ಟ್ರೋಫಿ ಲೈವ್: ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡಲು ಬಂದವರಿಗೆ ನಿರಾಸೆ
ಕಾರಣ ಇಂದು ಟಾಸ್ ಗೆದ್ದ ದೆಹಲಿ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡಲು ಸಾಧ್ಯವಾಗದು. ಆದರೂ ಕೊಹ್ಲಿ ಫೀಲ್ಡಿಂಗ್ ಮಾಡುವುದನ್ನು ನೋಡಲು ಸಾಕಷ್ಟು ಜನ ಸೇರಿದ್ದಾರೆ.
ವಿರಾಟ್ ಕೊಹ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ರಣಜಿ ಟ್ರೋಫಿ ಪಂದ್ಯವಾಡುತ್ತಿದ್ದಾರೆ. ಹೀಗಾಗಿ ಈ ಪಂದ್ಯವನ್ನು ಅಭಿಮಾನಿಗಳೂ ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯವನ್ನು ನೋಡಲು 10 ಸಾವಿರ ಪ್ರೇಕ್ಷಕರು ಸೇರುವ ನಿರೀಕ್ಷೆಯಿದೆ. ರಣಜಿ ಟ್ರೋಫಿ ಪಂದ್ಯವೊಂದಕ್ಕೆ ಇಷ್ಟೊಂದು ಸಂಖ್ಯೆಯಲ್ಲಿ ಪ್ರೇಕ್ಷಕರು ಬರುವುದು ವಿಶೇಷವಾಗಿದೆ.
ಇನ್ನು ಇಂದು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ರೈಲ್ವೇಸ್ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 12 ರನ್ ಗಳಿಸಿದೆ. ಈ ಪಂದ್ಯ ಜಿಯೋ ಸಿನಿಮಾದಲ್ಲಿ ಲೈವ್ ಲಭ್ಯವಿದ್ದು ಸಾಕಷ್ಟು ಜನ ಲೈವ್ ಆಗಿ ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ.