ಮೂರು ವಿಕೆಟ್ ಕಬಳಿಸಿ ಹೊಸ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್

ಭಾನುವಾರ, 5 ಡಿಸೆಂಬರ್ 2021 (16:44 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ಕಬಳಿಸಿರುವ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.

ಭಾರತ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ನ್ಯೂಜಿಲೆಂಡ್ ಇತ್ತೀಚೆಗಿನ ವರದಿ ಬಂದಾಗ 3 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದೆ. ಈ ಮೂರೂ ವಿಕೆಟ್ ಅಶ್ವಿನ್ ಪಾಲಾಗಿದೆ.

ಈ ಮೂಲಕ ನ್ಯೂಜಿಲೆಂಡ್-ಭಾರತ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ವಿಕೆಟ್ ಸಂಪಾದಿಸಿದ ರಿಚರ್ಡ್ ಹ್ಯಾಡ್ಲೀ ದಾಖಲೆಯನ್ನು ಸರಿಗಟ್ಟಿದ್ದಾರೆ. ಇಬ್ಬರೂ ಈಗ 65 ವಿಕೆಟ್ ಸಂಪಾದಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ