ವಿರಾಟ್ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿದ್ದಕ್ಕೆ ರೋಹಿತ್ ಅಭಿಮಾನಿಗಳು ಗರಂ

ಸೋಮವಾರ, 22 ಅಕ್ಟೋಬರ್ 2018 (10:10 IST)
ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅತೀ ಹೆಚ್ಚು ರನ್ ಗಳಿಸಿ ಗೆಲುವಿನ ರನ್ ಬಾರಿಸಿದ ರೋಹಿತ್ ಶರ್ಮಾ ಬದಲಿಗೆ ನಾಯಕ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 107 ಎಸೆತಗಳಲ್ಲಿ 140 ರನ್ ಗಳಿಸಿದ್ದರು. ಆದರೆ ರೋಹಿತ್ ಶರ್ಮಾ 117 ಎಸೆತಗಳಿಂದ 8 ಸಿಕ್ಸರ್ ಸಹಿತ 152 ರನ್ ಗಳಿಸಿದ್ದರು. ಅಲ್ಲದೆ ಸಿಕ್ಸರ್ ಬಾರಿಸುವ ಮೂಲಕ ಭಾರತದ ಗೆಲುವಿನ ಔಪಚಾರಿಕತೆ ಮುಗಿಸಿದ್ದರು.

ಹಾಗಿದ್ದರೂ ರೋಹಿತ್ ಗಿಂತ ಕಡಿಮೆ ರನ್ ಬಾರಿಸಿದ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೊಟ್ಟಿದ್ದೇಕೆ ಎಂದು ರೋಹಿತ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ