ರೋಹಿತ್ ಶರ್ಮಾ ಅಬ್ಬರಕ್ಕೆ ಸೈಲೆಂಟಾದ ವರುಣ

ಶುಕ್ರವಾರ, 8 ನವೆಂಬರ್ 2019 (09:00 IST)
ರಾಜ್ ಕೋಟ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾ ಪಂದ್ಯ ಗೆದ್ದುಕೊಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ 43 ಎಸೆತಗಳಲ್ಲಿ 85 ರನ್ ಚಚ್ಚಿದರೆ, ಶಿಖರ್ ಧವನ್ 27 ಬಾಲ್ ಗಳಲ್ಲಿ 37 ರನ್ ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 13 ಎಸೆತಗಳಲ್ಲಿ 24 ರನ್ ಗಳಿಸಿ ಟೀಂ ಇಂಡಿಯಾವನ್ನು ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಭಾರತ 15.4ಓವರ್ ಗಳಲ್ಲಿಯೇ 2 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು.

ಈ ಪಂದ್ಯಕ್ಕೆ ಮಳೆಯ ಭೀತಿಯಿತ್ತು. ಆದರೆ ಅಚ್ಚರಿಯೆಂದರೆ ನಿನ್ನೆ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ಗೆ ವರುಣನೂ ಸೈಲೆಂಟಾಗಿದ್ದ. ಈ ಗೆಲುವಿನೊಂದಿಗೆ ಅಂತಿಮ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ