ಟಿ20 ಸರಣಿಗೂ ಮೊದಲೇ 20-20 ಝಲಕ್ ತೋರಿಸಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
ಗುರುವಾರ, 1 ನವೆಂಬರ್ 2018 (17:03 IST)
ತಿರುವನಂತಪುರಂ: ಟಿ20 ಸರಣಿಗೂ ಮೊದಲೇ ತಿರುವನಂತಪುರಂನ ಮೈದಾನದಲ್ಲಿ ಚುಟುಕು ಕ್ರಿಕೆಟ್ ನ ಝಲಕ್ ಪ್ರೇಕ್ಷಕರಿಗೆ ಸಿಕ್ಕಿತು. ಇದಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಧನ್ಯವಾದ ಹೇಳಲೇಬೇಕು.
ವೆಸ್ಟ್ ಇಂಡೀಸ್ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಗೆಲುವಿಗೆ 105 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 14.5 ಓವರ್ ಗಳಲ್ಲೇ 1 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ಶಿಖರ್ ಧವನ್ ವಿಕೆಟ್ ಆರಂಭದಲ್ಲಿಯೇ ಕಳೆದುಕೊಂಡರೂ ನಂತರ ಜತೆಯಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ಮಾದರಿಯಲ್ಲಿ ಬ್ಯಾಟ್ ಬೀಸಿದರು. ರೋಹಿತ್ ಮತ್ತು ಕೊಹ್ಲಿ ಸಿಕ್ಸರ್, ಬೌಂಡರಿಗಳ ಸುರಿಮಳೆ ಸುರಿಸುತ್ತಿದ್ದರೆ ಪ್ರೇಕ್ಷಕರು ಹುಚ್ಚೆದ್ದು ಕುಣಿದರು. ರೋಹಿತ್ 56 ಎಸೆತಗಳಲ್ಲಿ 4 ಸಿಕ್ಸರ್ ಗಳೊಂದಿಗೆ ಅಜೇಯ 63 ರನ್ ಗಳಿಸಿದರೆ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿ ಅಜೇಯರಾಗುಳಿದರು. ಇದರೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದುಕೊಂಡಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.