ಸತತ ನಾಲ್ಕು ಟೆಸ್ಟ್ ಸೋಲಿನ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಜೊತೆಗೆ ಸ್ಥಾನಕ್ಕೂ ಕುತ್ತು

Krishnaveni K

ಸೋಮವಾರ, 9 ಡಿಸೆಂಬರ್ 2024 (11:50 IST)
ಮುಂಬೈ: ಟೀಂ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸತತವಾಗಿ ನಾಲ್ಕು ಟೆಸ್ಟ್ ಪಂದ್ಯಗಳನ್ನು ಸೋತಿದೆ. ಇದರ ಬೆನ್ನಲ್ಲೇ ತಂಡದಲ್ಲಿ ದೊಡ್ಡ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ.

ಅಡಿಲೇಡ್ ಟೆಸ್ಟ್ ನಲ್ಲಿ ಭಾರತದ ಸೋಲಿಗಿಂತ ಹೆಚ್ಚು ತಂಡದ ಮತ್ತು ನಾಯಕನ ಮನೋಭಾವವೇ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ರೋಹಿತ್ ಶರ್ಮಾಗೆ ಬ್ಯಾಟಿಂಗ್ ಜೊತೆಗೆ ನಾಯಕತ್ವದಲ್ಲೂ ಯಾವುದೇ ಆಸಕ್ತಿಯೇ ಇಲ್ಲದಂತಿದ್ದರು. ತೀರಾ ರಕ್ಷಣಾತ್ಮಕ ಮನೋಭಾವ ಹೊಂದಿದ್ದರು ಎಂದು ಮಾಜಿ ಕೋಚ್ ರವಿಶಾಸ್ತ್ರಿ ಟೀಕಿಸಿದ್ದಾರೆ.

ಬ್ಯಾಟಿಂಗ್ ನಲ್ಲಂತೂ ರೋಹಿತ್ ಕಳಪೆ ಫಾರ್ಮ್ ಮುಂದುವರಿದಿದೆ. ಇತ್ತ ನಾಯಕತ್ವದಲ್ಲೂ ಅವರು ವಿಫಲರಾಗಿದ್ದಾರೆ. ಹೀಗಾಗಿ ಅವರು ತಂಡದಲ್ಲಿರಲು ಲಾಯಕ್ಕಿಲ್ಲ ಎಂದು ಒತ್ತಾಯಗಳು ಕೇಳಿಬರುತ್ತಿವೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಸೋಲಿನ ಬಳಿಕವೇ ರೋಹಿತ್ ನಾಯಕತ್ವಕ್ಕೆ ಕೊಕ್ ನೀಡಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದವು.

ಆದರೆ ಬಿಸಿಸಿಐ ರೋಹಿತ್ ಗೆ ಆಸ್ಟ್ರೇಲಿಯಾ ಸರಣಿಯಲ್ಲಿ ಮತ್ತೊಂದು ಅವಕಾಶ ನೀಡಲು ಬಯಸಿತು. ಆದರೆ ಆಸೀಸ್ ಸರಣಿಯಲ್ಲೂ ರೋಹಿತ್ ಬ್ಯಾಟಿಂಗ್ ಜೊತೆಗೆ ನಾಯಕತ್ವದಲ್ಲೂ ನೀರಸವಾಗಿದ್ದಾರೆ. ಹೀಗಾಗಿ ಅವರಿಗೆ ಇದೇ ಕೊನೆಯ ಟೆಸ್ಟ್ ಸರಣಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ