ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ರೋಹಿತ್ ಶರ್ಮಾ ನಾಯಕ

ಬುಧವಾರ, 3 ನವೆಂಬರ್ 2021 (10:10 IST)
ಮುಂಬೈ: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟಿ20 ವಿಶ್ವಕಪ್ ಮುಗಿದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ  ವಿದಾಯ ಹೇಳಲಿದ್ದಾರೆ. ಅದಾದ ಬಳಿಕ ರೋಹಿತ್ ಟಿ20 ತಂಡಕ್ಕೆ ನಾಯಕರಾಗಲಿದ್ದಾರೆ ಎಂಬ ಮಾತುಗಳಿವೆ.

ನವಂಬರ್ 17 ರಿಂದ ನ್ಯೂಜಿಲೆಂಡ್ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿ ವೇಳೆಗೆ ತಂಡಕ್ಕೆ ಹೊಸ ಕೋಚ್ ಕೂಡಾ ಆಗಮನವಾಗುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ