ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಹಿಂದಿಕ್ಕಿದ ರೋಹಿತ್ ಶರ್ಮಾ

ಬುಧವಾರ, 1 ಸೆಪ್ಟಂಬರ್ 2021 (16:48 IST)
ದುಬೈ: ಐಸಿಸಿ ಲೇಟೆಸ್ಟ್ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ರೋಹಿತ್ ಶರ್ಮಾ ಹಿಂದಿಕ್ಕಿ ಭಾರತದ ಟಾಪ್ ಬ್ಯಾಟ್ಸ್ ಮನ್ ಆಗಿ ಹೊರಹೊಮ್ಮಿದ್ದಾರೆ.

 

ಇಂಗ್ಲೆಂಡ್ ವಿರುದ್ಧ ಮೂರೂ ಟೆಸ್ಟ್ ಸರಣಿಯಲ್ಲಿ ವಿಫಲರಾಗಿರುವ ಕೊಹ್ಲಿ ಐದನೇ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈಗ ಆ ಸ್ಥಾನ ರೋಹಿತ್ ಶರ್ಮಾ ಪಾಲಾಗಿದೆ. ಮೊದಲೆರಡು ಸ್ಥಾನದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ಇಂಗ್ಲೆಂಡ್ ನಾಯಕ ಜೋ ರೂಟ್ ಇದ್ದರು. ಆದರೆ ಈಗ ಟೀಂ ಇಂಡಿಯಾ ವಿರುದ್ಧ ಭರ್ಜರಿ ರನ್ ಗಳಿಸಿರುವ ರೂಟ್ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಬೌಲರ್ ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ 2 ಮತ್ತು ಜಸ್ಪ್ರೀತ್ ಬುಮ್ರಾ 10 ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ ಗೆ ನಾಲ್ಕನೇ ಸ್ಥಾನವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ