ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕಿತ್ತು ಹಾಕುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಅವರ ಈ ಒಂದು ಕನಸು ನನಸಾಗದೇ ಹೋಯ್ತು.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಿರು ಮಾದರಿಯಲ್ಲಿ ಟೀಂ ಇಂಡಿಯಾ ಯಶಸ್ಸು ಸಾಧಿಸಿತ್ತು. ಆದರೆ ಇದೀಗ ಟೆಸ್ಟ್ ಮತ್ತು ಟಿ20 ಮಾದರಿಯಿಂದ ನಿವೃತ್ತಿ ಪಡೆದಿರುವ ರೋಹಿತ್ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿರಲಿಲ್ಲ. ಇದೀಗ ಮುಂಬರುವ ಆಸ್ಟ್ರೇಲಿಯಾ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಸರಣಿಗೆ ಅವರು ನಾಯಕರಾಗಿರದೇ ಕೇವಲ ಆಟಗಾರನಾಗಿ ಮಾತ್ರ ಮುಂದುವರಿಯುವ ಸಾಧ್ಯತೆಯಿದೆ.
ರೋಹಿತ್ ಸ್ಥಾನಕ್ಕೆ ಶುಭಮನ್ ಗಿಲ್ ರನ್ನು ಟೀಂ ಇಂಡಿಯಾ ಏಕದಿನ ನಾಯಕನಾಗಿ ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ. 2023 ರಲ್ಲಿ ಏಕದಿನ ವಿಶ್ವಕಪ್ ಫೈನಲ್ ತನಕ ಹೋಗಿದ್ದ ರೋಹಿತ್ ಗೆ ತಮ್ಮ ನಾಯಕತ್ವದಲ್ಲಿ ಕಪ್ ಗೆಲ್ಲಲಾಗಲಿಲ್ಲ ಎಂಬ ಬೇಸರವಿತ್ತು. ಆದರೆ ಮುಂದಿನ ಏಕದಿನ ವಿಶ್ವಕಪ್ ವರೆಗೆ ತಂಡದ ನಾಯಕರಾಗಿ ಕಪ್ ಗೆದ್ದುಕೊಡುವ ಕನಸು ಅವರಲ್ಲಿತ್ತು. ಆದರೆ ಅದೀಗ ಕನಸಾಗಿಯೇ ಉಳಿಯುವ ಸಾಧ್ಯತೆಯೇ ಅಧಿಕವಾಗಿದೆ.