ಸಿಕ್ಸರ್ ಗಳ ದಾಖಲೆ ಮಾಡಲಿರುವ ರೋಹಿತ್ ಶರ್ಮಾ

ಭಾನುವಾರ, 19 ಸೆಪ್ಟಂಬರ್ 2021 (09:50 IST)
ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇಂದು ನಡೆಯಲಿರುವ ಐಪಿಎಲ್ 14 ರ ಎರಡನೇ ಭಾಗದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.


ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಇಂದು ಮೂರು ಸಿಕ್ಸರ್ ಸಿಡಿಸಿದರೆ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ದಾಖಲೆ ಮಾಡಲಿದ್ದಾರೆ. ಸದ್ಯಕ್ಕೆ 397 ಸಿಕ್ಸರ್ ಸಿಡಿಸಿರುವ ರೋಹಿತ್ ಮೂರು ಸಿಕ್ಸರ್ ಸಿಡಿಸಿದರೆ ಟಿ20 ಯಲ್ಲಿ 400 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ವಿಶಿಷ್ಟ ದಾಖಲೆ ಮಾಡಲಿದ್ದಾರೆ.

ಇಂಗ್ಲೆಂಡ್ ನಿಂದ ದುಬೈಗೆ ಬಂದಿಳಿದ ರೋಹಿತ್ ಆರು ದಿನಗಳ ಕ್ವಾರಂಟೈನ್ ಮುಗಿಸಿ ನಿನ್ನೆಯಷ್ಟೇ ತಂಡವನ್ನು ಕೂಡಿಕೊಂಡಿದ್ದಾರೆ. ಬಳಿಕ ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ