ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಟೀಂ ಇಂಡಿಯಾದಲ್ಲಿ ಅವಕಾಶ
ಬೆನ್ನು ನೋವಿಗೊಳಗಾಗಿದ್ದ ಶ್ರೇಯಸ್ ಅಯ್ಯರ್ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟಿಗ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿದೆ.
ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸುತ್ತಿರುವುದಕ್ಕೆ ಅಭಿಮಾನಿಗಳಿಂದ ಸಾಕಷ್ಟು ಆಕ್ರೋಶ ಬಂದಿತ್ತು. ಇದೀಗ ಶ್ರೇಯಸ್ ಗೆ ಗಾಯವಾಗಿರುವುದರಿಂದ ಕೊನೆಗೂ ಸಂಜು ಸ್ಯಾಮ್ಸನ್ ಗೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಂತಾಗಿದೆ.