ಠಾಕುರ್‌ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸ್ಪರ್ಧೆಯನ್ನು ತಡೆಯುವ ಅರ್ಜಿಗೆ ನಿರಾಕರಣೆ

ಬುಧವಾರ, 18 ಮೇ 2016 (13:53 IST)
ಪ್ರಸಕ್ತ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕುರ್ ಭಾನುವಾರ ನಿಗದಿಯಾಗಿರುವ ಕ್ರಿಕೆಟ್ ಮಂಡಳಿ ಚುನಾವಣೆಗೆ ನಿಲ್ಲುವುದನ್ನು ತಪ್ಪಿಸಬೇಕೆಂಬ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದ್ದರಿಂದ ಬಿಸಿಸಿಐ ಅಧ್ಯಕ್ಷಗಾದಿಗೆ ಏರುವ ಅನುರಾಗ್ ಠಾಕುರ್ ಬಯಕೆಗೆ ಚೇತರಿಕೆ ಸಿಕ್ಕಿದೆ.
 
 ಈ ಅರ್ಜಿಯನ್ನು 2013ರ ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಚಾಲನೆ ನೀಡಿದ ಬಿಹಾರ ಕ್ರಿಕೆಟ್ ಸಂಸ್ಥೆ ಸಲ್ಲಿಸಿದ್ದು, ಮ್ಯಾಚ್ ಫಿಕ್ಸಿಂಗ್ ಹಗರಣದಿಂದ ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಅಮಾನತಿಗೆ ದಾರಿ ಕಲ್ಪಿಸಿತ್ತು.
 ಬಿಹಾರ ಸಲ್ಲಿಸಿದ ಅರ್ಜಿಯಲ್ಲಿ ಲೋಧಾ ಸಮಿತಿಯ ವರದಿ ಪ್ರಕಾರ, ಆರೋಪ ಪಟ್ಟಿಯಲ್ಲಿ ಹೆಸರಿಸಲಾದ ವ್ಯಕ್ತಿಗಳು ಬಿಸಿಸಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಬಿಸಿಸಿಐ ಚುನಾವಣೆಗೆ ತಡೆ ನೀಡಬೇಕು ಅಥವಾ ಠಾಕುರ್ ಸ್ಪರ್ಧೆಯನ್ನು ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
 
 ಈ ಕುರಿತು ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್ ಬೇರೊಂದು ಪೀಠವು ಇದರ ವಿಚಾರಣೆ ನಡೆಸುತ್ತಿರುವುದರಿಂದ ನಾವು ಈ ವಿಷಯದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿತು. 
 
 ಠಾಕುರ್ ಶಶಾಂಕ್ ಮನೋಹರ್ ಬದಲಿಗೆ ಬಿಸಿಸಿಐ ಅಧ್ಯಕ್ಷರಾಗುವ ಆಕಾಂಕ್ಷೆ ಹೊಂದಿದ್ದಾರೆ. ಮನೋಹರ್ ಬಿಸಿಸಿಐ ಅಧ್ಯಕ್ಷ ಗಾದಿಗೆ ರಾಜೀನಾಮೆ ನೀಡಿ ಐಸಿಸಿ ಸ್ವತಂತ್ರ ಅಧ್ಯಕ್ಷ ಹುದ್ದೆ ವಹಿಸಿಕೊಂಡಿದ್ದರು. 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ