ದ್ವಿತೀಯ ಟೆಸ್ಟ್; ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ

ಗುರುವಾರ, 17 ನವೆಂಬರ್ 2016 (11:54 IST)
ವಿಶಾಖ ಪಟ್ಟಣ: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ. ಆರಂಭಿಕರಾದ ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ಅಲ್ಪ ಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಊಟದ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ ಭಾರತ 92 ರನ್ ಗಳಿಸಿದೆ. ಮುರಳಿ ವಿಜಯ್ 20 ರನ್  ಮಾಡಿದರೆ ಗಾಯದಿಂದ ಚೇತರಿಸಿಕೊಂಡ ತಂಡಕ್ಕೆ ಮರಳಿದ ಎಲ್ ರಾಹುಲ್  ಶೂನ್ಯ ಸುತ್ತಿದರು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ತಲಾ ಒಂದೊಂದು ವಿಕೆಟ್ ಕಿತ್ತರು.

ಸದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಮತ್ತು  ಚೇತೇಶ್ವರ ಪೂಜಾರ ಎಚ್ಚರಿಕೆಯ ಆಟವಾಡುತ್ತಿದ್ದು 70 ರನ್ ಗಳ ಅಜೇಯ ಜತೆಯಾಟವಾಡುತ್ತಿದ್ದಾರೆ. ಕೊಹ್ಲಿ 35 ಮತ್ತು ಪೂಜಾರ 37 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಇವರ ಆಟದ ಮೇಲೆ ಭಾರತದ ಭವಿಷ್ಯ ನಿಂತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ