ಸ್ವತಂತ್ರ ಐಸಿಸಿ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಅವಿರೋಧ ಆಯ್ಕೆ

ಗುರುವಾರ, 12 ಮೇ 2016 (15:53 IST)
ಬಿಸಿಸಿಐನ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಸ್ವತಂತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೋಪ್ಯ ಮತದಾನದ ಮೂಲಕ ಗುರುವಾರ ನಡೆದ ಚುನಾವಣೆಯಲ್ಲಿ ಅವರು ಐಸಿಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾದರು. 
 
ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಹೆಮ್ಮೆಯ ವಿಷಯವಾಗಿದ್ದು, ಅದಕ್ಕಾಗಿ ನಾನು ನನ್ನ ಸಾಮರ್ಥ್ಯದ ಮೇಲೆ ನಂಬಿಕೆ ಮತ್ತು ವಿಶ್ವಾಸ ಇರಿಸಿದ ಎಲ್ಲಾ ಐಸಿಸಿ ನಿರ್ದೇಶಕರಿಗೆ ಧನ್ಯವಾದ ಅರ್ಪಿಸುವುದಾಗಿ ಮನೋಹರ್ ಹೇಳಿದರು. 
 
ಮನೋಹರ್ ಮಂಗಳವಾರ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿ ನನ್ನ ಆತ್ಮಸಾಕ್ಷಿ ನನಗೆ ಈ ಹುದ್ದೆಯಲ್ಲಿ ಮುಂದುವರಿಯುವಂತೆ ಪ್ರೇರೇಪಿಸುತ್ತಿಲ್ಲ ಎಂದು ಹೇಳಿದ್ದರು. 

ವೆಬ್ದುನಿಯಾವನ್ನು ಓದಿ