ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

Sampriya

ಗುರುವಾರ, 3 ಜುಲೈ 2025 (19:06 IST)
Photo Credit X
ನವದೆಹಲಿ: ಲೀಡ್ಸ್‌ನಲ್ಲಿ ನಡೆದ ಪ್ರಥಮ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದ ಟೀ ಇಂಡಿಯಾ ನಾಯಕ ಶುಭ್ಮನ್ ಗಿಲ್‌ ಇದೀಗ ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಡಬಲ್ ಸೆಂಚುರಿ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ.

2018ರಲ್ಲಿ ವಿರಾಟ್ ಕೊಹ್ಲಿ ಮಾಡಿದ್ದ ದಾಖಲೆಯನ್ನು ಶುಭ್ಮನ್ ಗಿಲ್‌ ಮುರಿದಿದ್ದಾರೆ. –ಇದರಿಂದ ಇಂಗ್ಲೆಂಡ್‌ನಲ್ಲಿ ಹೆಚ್ಚು ಶತಕ ಬಾರಿಸಿದ ಭಾರತದ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಿಂಗ್ಲೆಂಡ್‌ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಭಾರತ 6 ವಿಕೆಟ್ ಕಳೆದುಕೊಂಡು 476 ರನ್ ಗಳಿಸಿದೆ. 

ಶುಭ್ಮನ್ ಗಿಲ್ ಅವರು 311 ಎಸೆತಕ್ಕೆ 200 ರನ್ ಗಳಿಸಿ ಉತ್ತಮ ಫಾರ್ಮ್‌ನೊಂದಿಗೆ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದ್ದಾರೆ. 

ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿರುವ ಶುಭ್ಮನ್ ಗಿಲ್‌ ಅವರು ಇದೀಗ ಹಲವು ದಾಖಲೆಗಳನ್ನು ಮುರಿದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ