ಸ್ಮೃತಿ ಮಂಧನಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಗೆದ್ದ ಭಾರತ ವನಿತೆಯರು
ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತಕ್ಕೆ ನೆರವಾಗಿದ್ದು ಸ್ಮೃತಿ ಮಂಧನಾ ಅಬ್ಬರದ ಬ್ಯಾಟಿಂಗ್.
ಕೇವಲ 53 ಎಸೆತಗಳಲ್ಲಿ 79 ರನ್ ಚಚ್ಚಿದ ಮಂಧನಾ ಕೊನೆಯವರೆಗೂ ಅಜೇಯರಾಗುಳಿದರು. ಅವರಿಗೆ ತಕ್ಕ ಸಾಥ್ ನೀಡಿದ ಶಫಾಲಿ ವರ್ಮ 20 ರನ್ ಗಳಿಸಿ ಔಟಾದರೆ ನಾಯಕಿ ಹರ್ಮನ್ ಪ್ರೀತ್ ಕೌರ್ ಅಜೇಯ 29 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 16.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿ ಭರ್ಜರಿ ಗೆಲುವು ಸಂಪಾದಿಸಿತು.