ಕೊನೆಗೂ ರೈನಾ ನಿವೃತ್ತಿ ಬಗ್ಗೆ ತುಟಿಬಿಚ್ಚಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಸೋಮವಾರ, 17 ಆಗಸ್ಟ್ 2020 (13:10 IST)
ಮುಂಬೈ: ಧೋನಿ ನಿವೃತ್ತಿಯಾದ ಬೆನ್ನಲ್ಲೇ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದರೂ ಅವರ ಹೆಸರನ್ನು ಬಿಸಿಸಿಐ ಉಲ್ಲೇಖಿಸಿಲ್ಲ ಎನ್ನುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು.


ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸುರೇಶ್ ರೈನಾ ವಿದಾಯದ ಬಗ್ಗೆ ಮಾತನಾಡಿದ್ದಾರೆ. ರೈನಾ ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಪ್ರಮುಖ ಆಟಗಾರರಾಗಿದ್ದರು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಧೋನಿ ಮತ್ತು ಯುವರಾಜ್ ಜತೆಗೆ ರೈನಾ ಭಾರತ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಿದ್ದರು ಎಂದು ದಾದ ಹೊಗಳಿ ಮಾತನಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ