ಕನ್ನಡಿಗ ಸುನಿಲ್ ಜೋಶಿಗೆ ಟೀಂ ಇಂಡಿಯಾ ಆಯ್ಕೆ ಮಾಡುವ ಹೊಣೆ

ಗುರುವಾರ, 5 ಮಾರ್ಚ್ 2020 (09:59 IST)
ಮುಂಬೈ: ಟೀಂ ಇಂಡಿಯಾ ನೂತನ ಆಯ್ಕೆ ಸಮಿತಿ ಆಯ್ಕೆ ನಡೆದಿದ್ದು, ಕನ್ನಡಿಗ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.


ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಜೋಶಿ, ವೆಂಕಟೇಶ್ ಪ್ರಸಾದ್ ಮತ್ತು ಶಿವರಾಮಕೃಷ್ಣನ್ ಇದ್ದರು. ಈ ಪೈಕಿ ಜೋಶಿ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕನ್ನಡಿಗ ಬಿಸಿಸಿಐನ ಮಹತ್ವದ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಜೋಶಿ ಜತೆಗೆ ಹರ್ವಿಂದರ್ ಸಿಂಗ್ ಕೂಡಾ ಆಯ್ಕೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಾಂಗ್ಲಾದೇಶ ತಂಡಕ್ಕೆ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡಿ ಅನುಭವವಿರುವ ಸುನಿಲ್ ಜೋಶಿಗೆ ಈಗ ಭಾರತ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕ್ರಿಕೆಟಿಗರನ್ನು ಆರಿಸುವ ಹೊಣೆ ಸಿಕ್ಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ