ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್
ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದಿದ್ದ ಟಿ20 ಸರಣಿ ವೇಳೆ ಸೂರ್ಯಗೆ ಪಾದ ಟ್ವಿಸ್ಟ್ ಆಗಿತ್ತು. ಆದ್ದರಿಂದ ಸೂರ್ಯಕುಮಾರ್ ಯಾದವ್ ಕಳೆದ ಆಫ್ರಿಕಾ, ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಯಲ್ಲೂ ಆಡಿರಲಿಲ್ಲ.
ಇದರ ಜೊತೆಗೆ ಸೂರ್ಯಗೆ ಹರ್ನಿಯಾ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಇದಕ್ಕೆ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಸರ್ಜರಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ತನ್ನ ಚೇತರಿಕೆಗೆ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ ಸೂರ್ಯ ಕನಿಷ್ಠ ಇನ್ನೂ ಒಂದು ತಿಂಗಳು ಕ್ರಿಕೆಟ್ ನಿಂದ ದೂರವುಳಿಯಲಿದ್ದಾರೆ. ಐಪಿಎಲ್ ನಲ್ಲೂ ಆರಂಭಿಕ ಪಂದ್ಯಗಳಿಂದ ಹೊರಗುಳಿದರೂ ಅಚ್ಚರಿಯಿಲ್ಲ.