ಟಿ20 ವಿಶ್ವಕಪ್ 2024: ಭಾರತ, ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ

Krishnaveni K

ಭಾನುವಾರ, 9 ಜೂನ್ 2024 (19:41 IST)
ನ್ಯೂಯಾರ್ಕ್: ಟಿ20 ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗ ಟಾಸ್ ವಿಳಂಬವಾಗಿದೆ.

ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು ಎಂದು ಮೊದಲೇ ಹವಾಮಾನ ವರದಿಗಳಾಗಿತ್ತು. ಮಳೆಯಿಂದಾಗಿ ಮೈದಾನದ ಕವರ್ ಇನ್ನೂ ತೆಗೆದಿಲ್ಲ. ಮೈದಾನ ಒದ್ದೆಯಾಗಿರುವುದರಿಂದ ಅಂಪಾಯರ್ ಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಇದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯಕ್ಕೆ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಆದರೆ ಮಳೆಯಿಂದಾಗಿ ಪಂದ್ಯ ತಡವಾಗಿರುವುದರಿಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಪರಿಸ್ಥಿತಿ ನೋಡಿಕೊಂಡು ಮೈದಾನ ಒಣಗಿದ ಬಳಿಕ ಟಾಸ್ ನಡೆಯಲಿದೆ.

ಇಂದಿನ ಪಂದ್ಯ ಪಾಕಿಸ್ತಾನದ ಪಾಲಿಗೆ ಮಹತ್ವದ್ದಾಗಿದೆ. ಕಳೆದ ಪಂದ್ಯದಲ್ಲಿ ಅಮೆರಿಕಾ ವಿರುದ್ಧ ಸೋತಿದ್ದ ಪಾಕಿಸ್ತಾನಕ್ಕೆ ಈಗ ಮುಂದಿನ ಹಂತಕ್ಕೆ ಏರಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಈಗ ಮಳೆ ಕೊಂಚ ಬಿಡುವು ನೀಡಿದ್ದು ಕೆಲವೇ ಕ್ಷಣಗಳಲ್ಲಿ ಟಾಸ್ ನಡೆಯುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ