ಟಿ20 ವಿಶ್ವಕಪ್: ಭಾರತಕ್ಕೆ ಇಂದು ಆಸಿಸ್ ವಿರುದ್ಧ ಅಭ್ಯಾಸ ಪಂದ್ಯ
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 24 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ತನ್ನ ಸಾಮರ್ಥ್ಯ ಒರೆಗೆ ಹಚ್ಚಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯಲಿದೆ.