ಏಷ್ಯಾ ಇಲೆವೆನ್ ಪರ ಆಡಲಿರುವ ಆರು ಟೀಂ ಇಂಡಿಯಾ ಕ್ರಿಕೆಟಿಗರ ಹೆಸರು ಬಹಿರಂಗ

ಬುಧವಾರ, 26 ಫೆಬ್ರವರಿ 2020 (09:17 IST)
ಮುಂಬೈ: ಬಾಂಗ್ಲಾದೇಶ ಸಂಸ್ಥಾಪಕರ ಸ್ಮರಣಾರ್ಥ ಬಾಂಗ್ಲಾ ಕ್ರಿಕೆಟ್ ಸಂಸ್ಥೆ ಆಯೋಜಿಸುತ್ತಿರುವ ಏಷ್ಯಾ ಇಲೆವೆನ್ ಮತ್ತು ವಿಶ್ವ ಇಲೆವೆನ್ ನಡುವಿನ ಟಿ20 ಕ್ರಿಕೆಟ್ ಪಂದ್ಯದಲ್ಲಿ ಆಡಲಿರುವ ಭಾರತೀಯ ಕ್ರಿಕೆಟಿಗರ ಹೆಸರು ಬಹಿರಂಗವಾಗಿದೆ.


ಏಷ್ಯಾ ಇಲೆವೆನ್ ತಂಡದಲ್ಲಿ ಒಟ್ಟು ಆರು ಮಂದಿ ಟೀಂ ಇಂಡಿಯಾ ಆಟಗಾರರು ಆಡಲಿದ್ದಾರೆ. ಉಳಿದಂತೆ ಬಾಂಗ್ಲಾ ಮತ್ತು ಶ್ರೀಲಂಕಾ ತಂಡದ ಆಟಗಾರರೂ ಪಾಲ್ಗೊಳ್ಳಲಿದ್ದಾರೆ.

ಭಾರತೀಯ ಆಟಗಾರರ ಪೈಕಿ ವಿರಾಟ್ ಕೊಹ್ಲಿ,  ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ ಆಡಲಿದ್ದಾರೆ. ಆದರೆ ಗಾಯಗೊಂಡು ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್ ಶರ್ಮಾ ಆಡುತ್ತಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ