ಏಷ್ಯಾ ಕಪ್ ಫೈನಲ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾ ಆಲ್ ರೌಂಡರ್ ಗೆ ಗಾಯ!

ಶನಿವಾರ, 16 ಸೆಪ್ಟಂಬರ್ 2023 (17:36 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾ ಆಲ್ ರೌಂಡರ್ ಅಕ್ಸರ್ ಪಟೇಲ್ ಗೆ ಗಾಯವಾಗಿದೆ. ಈ ಹಿನ್ನಲೆಯಲ್ಲಿ ಕೊನೆಯ ಕ್ಷಣದಲ್ಲಿ ವಾಷಿಂಗ್ಟನ್ ಸುಂದರ್ ರನ್ನು ಕೊಲೊಂಬೊಗೆ ರವಾನಿಸಲಾಗಿದೆ.

ಅಕ್ಸರ್ ಪಟೇಲ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದರು. ಬ್ಯಾಟಿಂಗ್ ವೇಳೆ ಅಕ್ಸರ್ ಕೈಗೆ ಪದೇ ಪದೇ ಬಾಲ್ ತಗುಲಿ ಗಾಯವಾಗಿದೆ. ಈ ಹಿನ್ನಲೆಯಲ್ಲಿ ಅವರು ಫೈನಲ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ಮುಂಬರುವ ವಿಶ್ವಕಪ್ ಹಿನ್ನಲೆಯಲ್ಲಿ ಅಕ್ಸರ್ ಚೇತರಿಸಿಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಟೀಂ ಇಂಡಿಯಾ ಕೊನೆಯ ಒಂದು ಪಂದ್ಯಕ್ಕಾಗಿ ವಾಷಿಂಗ್ಟನ್‍ ಸುಂದರ್ ರನ್ನು ಕರೆಸಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ