ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಆಯ್ಕೆ: ಕೊಹ್ಲಿ, ಕೆಎಲ್ ರಾಹುಲ್ ವಾಪಸ್
ಶುಕ್ರವಾರ, 15 ಫೆಬ್ರವರಿ 2019 (17:43 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಗೂ ಮೊದಲು ನಡೆಯಲಿರುವ ಕೊನೆಯ ಅಂತಾರಾಷ್ಟ್ರೀಯ ಸರಣಿ ಇದಾಗಿದ್ದು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
ಫೆಬ್ರವರಿ 24 ರಿಂದ ಟಿ20 ಸರಣಿ ಆರಂಭವಾಗಲಿದ್ದು, ವಿರಾಟ್ ಕೊಹ್ಲಿ ತಂಡದ ನೇತೃತ್ವ ವಹಿಸಲಿದ್ದಾರೆ. ಅವರಲ್ಲದೆ, ರಿಷಬ್ ಪಂತ್, ಕೆಎಲ್ ರಾಹುಲ್, ವಿಜಯ್ ಶಂಕರ್ ಮುಂತಾದವರಿಗೆ ಸ್ಥಾನ ಕಲ್ಪಿಸಲಾಗಿದೆ. ತಂಡ ಇಂತಿದೆ: