ದ.ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಮೂರು ಫಾರ್ಮ್ಯಾಟ್ ಮೂವರು ನಾಯಕರು!

ಗುರುವಾರ, 30 ನವೆಂಬರ್ 2023 (20:53 IST)
ಮುಂಬೈ: ದ.ಆಫ್ರಿಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಸಿಸಿ ಇದೀಗ ಬಿಡುಗಡೆ ಮಾಡಿದೆ. ಏಕದಿನ ಮತ್ತು ಟಿ20 ಮತ್ತು ಟೆಸ್ಟ್ ಸರಣಿಗೆ ತಂಡ ಆಯ್ಕೆ ಮಾಡಲಾಗಿದೆ.

ವಿಶೇಷವೆಂದರೆ ಮೂರೂ ಮಾದರಿಗೆ ಮೂವರು ಪ್ರತ್ಯೇಕ ನಾಯಕರನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಏಕದಿನಕ್ಕೆ ಕೆಎಲ್ ರಾಹುಲ್ ಮತ್ತು ಟಿ20 ಕ್ರಿಕೆಟ್ ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ತಂಡ ಇಂತಿದೆ:
ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿನ ಜೈಸ್ವಾಲ್, ಶುಬ್ನಮ್ ಗಿಲ್, ಋತುರಾಜ್ ಗಾಯಕ್ ವಾಡ್, ತಿಲಕ್ ವರ್ಮ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ),  ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷ್ ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ದೀಪಕ್ ಚಹರ್.

ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಕೇಶ್ ಕುಮಾರ್, ಆವೇಶ್ ಖಾನ್, ಅರ್ಷ್ ದೀಪ್ ಸಿಂಗ್, ದೀಪಕ್ ಚಹರ್.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ನಮ್ ಗಿಲ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ ಕೃಷ್ಣ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ