ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತದ ಪರ ಮೈದಾನಕ್ಕಿಳಿದಿಲ್ಲ. ಟೆಸ್ಟ್ ಮತ್ತು ಟಿ20 ಕ್ರಿಕೆಟ್ ನಿಂದ ನಿವೃತ್ತಿ ಪಡೆದಿರುವ ಈ ಇಬ್ಬರು ದಿಗ್ಗಜರ ಆಟವನ್ನು ಅಭಿಮಾನಿಗಳು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಆದರೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಬ್ಬರೂ ಆಡುತ್ತಿದ್ದಾರೆ. ಈ ಸರಣಿಗೆ ಶುಭಮನ್ ಗಿಲ್ ನಾಯಕರಾಗಿದ್ದು ರೋಹಿತ್ ಸಾಮಾನ್ಯ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ.
ಸರಣಿಯ ಮೊದಲ ಪಂದ್ಯ ಅಕ್ಟೋಬರ್ 19 ರಂದು ಪರ್ತ್ ನ ಆಪ್ಟಸ್ ಮೈದಾನದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಅಕ್ಟೋಬರ್ 23 ರಂದು ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ. ಮೂರನೇ ಮತ್ತು ಅಂತಿಮ ಪಂದ್ಯ ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 9 ಗಂಟೆಗೆ ಆರಂಭವಾಗುವುದು. ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಮತ್ತು ಜಿಯೋ ಹಾಟ್ ಸ್ಟಾರ್ ನಲ್ಲಿ ಪಂದ್ಯಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ.