ಭಾರತ-ನ್ಯೂಜಿಲೆಂಡ್ ಟೆಸ್ಟ್: ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಫ್ಲಾಪ್ ಶೋ

ಶನಿವಾರ, 29 ಫೆಬ್ರವರಿ 2020 (12:20 IST)
ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 242 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತೀಯ ಬ್ಯಾಟ್ಸ್ ಮನ್ ಗಳು ಮತ್ತೊಂದು ಫ್ಲಾಪ್ ಶೋ ಕೊಟ್ಟಿದ್ದಾರೆ.


ಭಾರತದ ಮೊದಲ ಇನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಮತ್ತು ಪೃಥ‍್ವಿ ಶಾ ತಲಾ 54 ಮತ್ತು ಹನುಮ ವಿಹಾರಿ 55 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಯಾವುದೇ ಪ್ರತಿರೋಧವೂ ಕಂಡುಬರಲಿಲ್ಲ. ಇದರಿಂದಾಗಿ ಕೇವಲ 242 ರನ್ ಗಳಿಗೆ ಆಲೌಟ್ ಆಗಿದೆ.

ಭಾರತದ ಮೊತ್ತಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 63 ರನ್ ಗಳಿಸಿದೆ. ಕಿವೀಸ್ ಪರ ಟಾಮ್ ಲಥನ್ 27 ಮತ್ತು ಟಾಮ್ ಬ್ಲಂಡೆಲ್ 29 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ