ಏಷ್ಯಾ ಕಪ್ ಗೆಲ್ಲಬೇಕಾದ್ರೆ ವಿರಾಟ್ ಕೊಹ್ಲಿ ಬೇಕಾಗಿಲ್ಲ ಎಂದ ಮಾಜಿ ಕ್ರಿಕೆಟಿಗ ಯಾರು ಗೊತ್ತೇ?
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗಿದ್ದರೂ ಕೊಹ್ಲಿ ಅನುಪಸ್ಥಿತಿ ಭಾರತವನ್ನು ಕಾಡದು. ಅವರಿಲ್ಲದೆಯೂ ಟೀಂ ಇಂಡಿಯಾ ಏಷ್ಯಾ ಕಪ್ ಗೆಲ್ಲಬಹುದು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಖಾಸಗಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಗಂಗೂಲಿ ಈ ರೀತಿ ಅಭಿಪ್ರಾಯಪಟ್ಟಿದ್ದರೆ, ಇನ್ನೊಬ್ಬ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ಇಂತಹ ಪ್ರತಿಷ್ಠಿತ ಟೂರ್ನಿಗೆ ವಿರಾಟ್ ಕೊಹ್ಲಿಯಂತಹ ಆಟಗಾರರ ಅಗತ್ಯ ತಂಡಕ್ಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.