ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ವೇಳಾ ಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Krishnaveni K

ಗುರುವಾರ, 13 ಫೆಬ್ರವರಿ 2025 (10:44 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಮುಗಿಸಿಕೊಂಡಿರುವ ಟೀಂ ಇಂಡಿಯಾ ಇನ್ನೀಗ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧವಾಗಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಮತ್ತು ಎಲ್ಲಿ ಲೈವ್ ವೀಕ್ಷಿಸಬೇಕು ಎಂಬ ವಿವರ ಇಲ್ಲಿದೆ ನೋಡಿ.

ಮಿನಿ ವಿಶ್ವಕಪ್ ಎಂದೇ ಚಿರಪರಿಚಿತವಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದೆ. ಭಾರತ ಆಡಲಿರುವ ಪಂದ್ಯಗಳು ಮಾತ್ರ ದುಬೈನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲಿದೆ.

ಫೆಬ್ರವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಕರಾಚಿ ಮೈದಾನದಲ್ಲಿ ನಡೆಯುವುದು.

ಭಾರತಕ್ಕೆ ಮೊದಲ ಪಂದ್ಯವಿರುವುದು ಬಾಂಗ್ಲಾದೇಶ ವಿರುದ್ಧ. ಫೆಬ್ರವರಿ 20 ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಮೊದಲ ಪಂದ್ಯವನ್ನು ಭಾರತ ಆಡಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2.30 ಕ್ಕೆ ಆರಂಭವಾಗುವುದು.

ಎರಡನೇ ಪಂದ್ಯ ಫೆಬ್ರವರಿ 23 ರಂದು ಪಾಕಿಸ್ತಾನ ವಿರುದ್ಧ ನಡೆಯಲಿದೆ. ಈ ಪಂದ್ಯವೂ ದುಬೈನಲ್ಲಿಯೇ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದೆ. ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಭಾರತ ಮೂರನೇ ಪಂದ್ಯವಾಡಲಿದೆ. ಈ ಮೂರು ಪಂದ್ಯಗಳಲ್ಲಿ ಗೆಲುವು ಆಧರಿಸಿ ಭಾರತದ ಮುಂದಿನ ಪಂದ್ಯಗಳು ನಿರ್ಧಾರವಾಗಲಿದೆ. ಈ ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ಅಥವಾ ಡಿಸ್ನಿ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ