ಟೀಂ ಇಂಡಿಯಾ ಕ್ರಿಕೆಟಿಗರ ಬೀಚ್ ಮಸ್ತಿ
ಭಾನುವಾರ ಸೂಪರ್ ಫೋರ್ ಹಂತದ ಪಂದ್ಯಗಳು ಪ್ರಾರಂಭವಾಗಲಿದ್ದು, ಅದಕ್ಕೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರು ಬೀಚ್ ನಲ್ಲಿ ಸರ್ಫಿಂಗ್, ಬೀಚ್ ವಾಲಿಬಾಲ್ ಆಡುತ್ತಾ ರಿಲ್ಯಾಕ್ಸ್ ಆಗಿದ್ದಾರೆ.
ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಯಜುವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಸೇರಿದಂತೆ ಎಲ್ಲಾ ಕ್ರಿಕೆಟಿಗರು ಜೊತೆಯಾಗಿ ಮೋಜು ಮಸ್ತಿ ಮಾಡುವ ಕ್ಷಣಗಳನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇವರಿಗೆ ಕೋಚ್ ದ್ರಾವಿಡ್ ಸೇರಿದಂತೆ ಸಹಾಯಕ ಸಿಬ್ಬಂದಿಗಳೂ ಜೊತೆಯಾಗಿದ್ದಾರೆ.